....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Friday 20 February 2015

ಸಂಭ್ರಮದ ಶಾಲಾ ವಾರ್ಷಿಕೋತ್ಸವ

            2014-15 ನೇ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ನಡೆದ ಧ್ವಜಾರೋಹಣವನ್ನು ನಮ್ಮ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ನಳಿನಿ ವಿ. ಯು ರವರು ನೆರವೇರಿಸಿದರು. ಬಳಿಕ ಎಲ್ಲರಿಗೂ ಲಘು ಉಪಹಾರವನ್ನು ನೀಡಲಾಯಿತು. ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.
             ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಮಂಜೇಶ್ವರ ಕ್ಷೇತ್ರ ನಿರೂಪಣಾಧಿಕಾರಿ ಶ್ರೀ ವಿಜಯಕುಮಾರ್'ರವರು ನೆರವೇರಿಸಿದರು. ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ನಂದಿಕೇಶನ್ ಯನ್'ರವರು ಅಧ್ಯಕ್ಷತೆ ವಹಿಸಿ ಶಾಲಾ ಬೆಳವಣಿಗೆಯ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಶಾಲಾ ವಾರ್ಷಿಕ ವರದಿಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ರವರು ಮಂಡಿಸಿದರು. ಇದೇ ಸಂದರ್ಭದಲ್ಲಿ ನಮ್ಮ ಶಾಲಾ ಮಕ್ಕಳಿಗೆ ಉಚಿತ ಯೋಗ ತರಭೇತಿ ನೀಡಿದ ಯೋಗ ಶಿಕ್ಷಕಿ ಶ್ರೀಮತಿ ಗಿರಿಜಾ ಯನ್ ಉದ್ಯಾವರ್'ರವರನ್ನು ಸನ್ಮಾನಿಸಲಾಯಿತು. ಶಾಲಾ ಪ್ರಬಂಧಕ ಶ್ರೀ ವಿಶ್ವನಾಥ್ ಪಿ ಉದ್ಯಾವರ್ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯ ಶ್ರೀ ಪವನ್ ಕುಮಾರ್, ನಿವೃತ್ತ ಶಿಕ್ಷಕಿ ಶ್ರೀಮತಿ ಯಶೋಧ ಬಟ್ಟಪ್ಪಾಡಿ, ಉದ್ಯಾವರ ಬೋವಿ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಶ್ರೀ ಕೃಷ್ಣಪ್ಪ ಬೆಂಗರೆ, ಪಿ.ಟಿ.ಎ ಅಧ್ಯಕ್ಷ ಶ್ರೀ ಚಂದ್ರಶೇಖರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಗೀತಾ ಎ ರವರು ಸ್ವಾಗತಿಸಿ, ಅರಬಿಕ್ ಅಧ್ಯಾಪಕ ಅಬ್ದುಲ್ ಮಜೀದ್'ರವರು ಧನ್ಯವಾದವನ್ನಿತ್ತರು. ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್. ಪಿ ರವರು ಕಾರ್ಯಕ್ರಮ ನಿರೂಪಿಸಿದರು.
             ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
             ಶಾಲಾ ಮಕ್ಕಳ ಕ್ರೀಡಾಕೂಟದ ಬಹುಮಾನದ ಪ್ರಾಯೋಜಕತ್ವವನ್ನು ದಿ| ಶ್ರೀ ಆನಂದ ಅಂಬು ಅವರ ಸ್ಮರಣಾರ್ಥ ಅವರ ಸುಪುತ್ರ ರವಿ ಉದ್ಯಾವರ್, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ವೇಷ ಭೂಷಣದ ಪ್ರಾಯೋಜಕತ್ವವನ್ನು ಯೋಗ ಶಿಕ್ಷಕಿ ಶ್ರೀಮತಿ ಗಿರಿಜಾ ಯನ್ ಉದ್ಯಾವರ್ ಹಾಗೂ ಬೆಳಗಿನ ಲಘು ಉಪಹಾರದ ಪ್ರಾಯೋಜಕತ್ವವನ್ನು ಶ್ರೀ ವಿಶ್ವನಾಥ್ ಸಿ ಉದ್ಯಾವರ್ ವಹಿಸಿದ್ದರು. ಇವರಿಗೆಲ್ಲರಿಗೂ ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ ಕಮಿಟಿಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸುತ್ತಿದ್ದೇವೆ.

























3 comments:

  1. well arranged programme. congratulations.................. Keep it up..................

    ReplyDelete