Saturday, 13 February 2016
ಶಾಲಾ ವಾರ್ಷಿಕೋತ್ಸವ
ನಮ್ಮ ಶಾಲಾ ವಾರ್ಷಿಕೋತ್ಸವವು ತಾ. 12-02-2016 ನೇ ಶುಕ್ರವಾರದಂದು ವಿಜೃ0ಭಣೆಯಿಂದ ಜರಗಿತು. ಬೆಳಗ್ಗೆ ನಡೆದ ಧ್ವಜಾರೋಹಣವನ್ನು ನಿವೃತ್ತ ಅಧ್ಯಾಪಿಕೆ ಶ್ರೀಮತಿ ಲಕ್ಷ್ಮೀ ಐಲ್ ರವರು ನೆರವೇರಿಸಿದರು. ಬಳಿಕ ಎಲ್ಲರಿಗೂ ಬೆಳಗಿನ ಉಪಹಾರವನ್ನು ನೀಡಲಾಯಿತು. ಮಧ್ಯಾಹ್ನ ಭೂರಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಮಧ್ಯಾಹ್ನ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ನಂದಿಕೇಶನ್ ಯನ್ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಮಂಜೇಶ್ವರ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾರವರು ಉದ್ಘಾಟಿಸಿದರು. ಉದ್ಯಾವರ ಬೋವಿ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಶ್ರೀ ಕೃಷ್ಣಪ್ಪ ಬೆಂಗರೆ, ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಕ್ರೀಡೋತ್ಸವದ ವಿಜೇತರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಶಾಲಾ ಪ್ರಬಂಧಕ ಶ್ರೀ ವಿಶ್ವನಾಥ್ ಪಿ ಉದ್ಯಾವರ್ ವಿತರಿಸಿದರು. ಶಾಲಾ ವಾರ್ಷಿಕ ವರದಿಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ಮಂಡಿಸಿದರು. ಶಾಲಾ ಅಧ್ಯಾಪಿಕೆ ಶ್ರೀಮತಿ ಭವ್ಯಶ್ರೀ ಯನ್ ಸ್ವಾಗತಿಸಿ, ಶ್ರೀಮತಿ ಗೀತಾ ಎ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

Thursday, 11 February 2016
Friday, 5 February 2016
Subscribe to:
Posts (Atom)